bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 6
Luke 6
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 7 →
1
ಒಂದಾನೊಂದು ಸಬ್ಬತ್ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
2
ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್ದಿನದಲ್ಲಿ ಮಾಡಬಾರದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ
3
ಯೇಸು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?
4
ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಉತ್ತರಕೊಟ್ಟು
5
ಮನುಷ್ಯಕುಮಾರನು ಸಬ್ಬತ್ದಿನಕ್ಕೆ ಒಡೆಯನಾಗಿದ್ದಾನೆ ಎಂದು ಅವರಿಗೆ ಹೇಳಿದನು.
6
ಮತ್ತೊಂದು ಸಬ್ಬತ್ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
7
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ಸಿಕ್ಕಬೇಕೆಂದು ಸಬ್ಬತ್ದಿನದಲ್ಲಿ ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
8
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.
9
ಅವನು ಎದ್ದು ನಿಂತುಕೊಂಡನು. ಆಗ ಯೇಸು ಅವರಿಗೆ - ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಸಬ್ಬತ್ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ಹಾಳುಮಾಡುವದೋ ಎಂದು ಹೇಳಿ
10
ಸುತ್ತಲೂ ಅವರೆಲ್ಲರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈ ವಾಸಿಯಾಯಿತು.
11
ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
12
ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.
13
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.
14
ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ,
15
ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,
16
ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ.
17
ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.
18
ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.
19
ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನು ವಾಸಿಮಾಡುತ್ತಿದ್ದದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವದಕ್ಕೆ ಪ್ರಯತ್ನಮಾಡಿದರು.
20
ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -
21
ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
22
ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
23
ಆ ದಿನದಲ್ಲಿ ಸಂತೋಷಪಡಿರಿ, ಕುಣಿದಾಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು ಎಂದು ತಿಳುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
24
ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖ ನಿಮಗೆ ಬಂದದೆ.
25
ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
26
ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದರು.
27
ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
28
ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.
29
ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ.
30
ನಿನ್ನನ್ನು ಬೇಡುವವರೆಲ್ಲರಿಗೆ ಕೊಡು; ನಿನ್ನ ಸೊತ್ತು ಕಸುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
31
ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.
32
ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
33
ನಿಮಗೆ ಮೇಲನ್ನು ಮಾಡುವವರಿಗೇ ನೀವು ಮೇಲನ್ನು ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
34
ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಾವು ಕೊಟ್ಟಷ್ಟು ತಮಗೆ ತಿರಿಗಿ ಸಿಕ್ಕೀತೆಂದು ಪಾಪಿಷ್ಠರಿಗೆ ಸಾಲ ಕೊಡುತ್ತಾರಲ್ಲಾ.
35
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36
ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ.
37
ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;
38
ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.
39
ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರೀ ತೋರಿಸುವದಕ್ಕಾದೀತೇ? ಅವರಿಬ್ಬರೂ ಕುಣಿಯಲ್ಲಿ ಬೀಳುವರಲ್ಲವೆ.
40
ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ತೀರಾ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41
ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?
42
ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.
43
ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವದಿಲ್ಲ; ಹಾಗೆಯೇ ಹುಳುಕು ಮರವು ಒಳ್ಳೆಯ ಫಲವನ್ನು ಕೊಡುವದಿಲ್ಲ.
44
ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವದಿಲ್ಲ; ಗಜ್ಜುಗದ ಮೆಳೆಯಲ್ಲಿ ದ್ರಾಕ್ಷೇಹಣ್ಣುಗಳನ್ನು ಕೊಯ್ಯುವದಿಲ್ಲ.
45
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.
46
ಇದಲ್ಲದೆ ನೀವು ನನ್ನನ್ನು ಸ್ವಾಮೀ ಸ್ವಾಮೀ ಅಂತ ಕರೆದು ನಾನು ಹೇಳುವದನ್ನು ನಡಿಸದೆ ಇರುವದೇಕೆ?
47
ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ.
48
ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
49
ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 7 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24