bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Malachi 1
Malachi 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 2 →
1
ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.
2
ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,
3
ಆದರೆ ನಾನು ಯಾಕೋಬನನ್ನು ಪ್ರೀತಿಸಿ ಏಸಾವನನ್ನು ದ್ವೇಷಿಸಿ ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಕಾಡುನರಿಗಳ ಪಾಲುಮಾಡಿದೆನಷ್ಟೆ; ಇದು ಯೆಹೋವನ ನುಡಿ.
4
ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.
5
ನೀವೇ ಇದನ್ನು ಕಣ್ಣಾರೆ ಕಂಡು - ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ ಮಹಾಮಹಿಮೆಯುಳ್ಳವನು ಅಂದುಕೊಳ್ಳುವಿರಿ.
6
ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.
7
ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.
8
ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;
9
ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.
10
ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
11
ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.
12
ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
13
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.
14
ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.
Jump to:
Chapter 1
Chapter 2
Chapter 3
Chapter 4
Chapter 2 →
All chapters:
1
2
3
4