bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Malachi 3
Malachi 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
1
ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.
2
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;
3
ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
4
ಆಗ ಯೆಹೂದದ ಮತ್ತು ಯೆರೂಸಲೇವಿುನ ನೈವೇದ್ಯವು ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾಗಿದ್ದಂತೆ ಆಗಿರುವದು.
5
ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
6
ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.
7
ನಿಮ್ಮ ಪಿತೃಗಳ ಕಾಲದಿಂದಲೂ ನೀವು ನನ್ನ ವಿಧಿಗಳಿಗೆ ಓರೆಯಾದಿರಿ, ಅವುಗಳನ್ನು ಅನುಸರಿಸಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಯಾವ ವಿಷಯದಲ್ಲಿ ತಿರುಗೋಣವೆನ್ನುತ್ತೀರಾ?
8
ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
9
ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.
10
ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.
11
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.
12
ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.
13
ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?
14
ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;
15
ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.
16
ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
17
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.
18
ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
All chapters:
1
2
3
4