bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Mark 1
Mark 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 2 →
1
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.
2
ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ಸರಿಮಾಡುವನೆಂತಲೂ
3
ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂತಲೂ
4
ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ ಯೋಹಾನನು ಬಂದು ಜನರಿಗೆ - ನೀವು ಪಾಪಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿಹೇಳುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
5
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
6
ಈ ಯೋಹಾನನು ಒಂಟೆಯ ಕೂದಲಿನ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ವಿುಡಿತೆಯನ್ನೂ ಕಾಡುಜೇನನ್ನೂ ಆಹಾರ ಮಾಡುತ್ತಿದ್ದನು.
7
ಅವನು - ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಬಾರನ್ನು ಬೊಗ್ಗಿಕೊಂಡು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ.
8
ನಾನು ನಿಮಗೆ ನೀರಿನ ಸ್ನಾನ ಮಾಡಿಸಿದೆನು; ಆತನಾದರೋ ನಿಮಗೆ ಪವಿತ್ರಾತ್ಮದ ಸ್ನಾನಮಾಡಿಸುವನು ಎಂದು ಸಾರಿಹೇಳಿದನು.
9
ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.
10
ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.
11
ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.
12
ಕೂಡಲೆ ಯೇಸು ದೇವರಾತ್ಮಪ್ರೇರಿತನಾಗಿ ಅಡವಿಗೆ ಹೋದನು.
13
ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.
14
ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -
15
ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.
16
ಹೀಗಿರುವಲ್ಲಿ ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನೂ ಸೀಮೋನನ ತಮ್ಮನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆಬೀಸುವದನ್ನು ಕಂಡನು. ಅವರು ಬೆಸ್ತರು.
17
ಯೇಸು ಅವರಿಗೆ - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ
18
ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.
19
ಇನ್ನೂ ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು.
20
ಇವರು ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೆ ಇವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
21
ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.
22
ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.
23
ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
24
ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.
25
ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟು ಹೋಗು ಎನ್ನಲಾಗಿ
26
ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.
27
ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.
28
ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.
29
ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.
30
ಅಲ್ಲಿ ಸೀಮೋನನ ಅತ್ತೆ ಜ್ವರ ಬಂದು ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31
ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
32
ಸಂಜೆಯಾಗಿ ಹೊತ್ತು ಮುಣುಗಿದ ಮೇಲೆ ಜನರು ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನೂ ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33
ಊರೆಲ್ಲಾ ಬಾಗಲಿನ ಮುಂದೆ ಒಟ್ಟುಗೂಡಿತ್ತು.
34
ಆಗ ಆತನು ತರತರವಾದ ರೋಗಗಳಿಂದ ಮೈಯಲ್ಲಿ ನೆಟ್ಟಗಿಲ್ಲದ ಬಹು ಜನರನ್ನು ವಾಸಿಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಮತ್ತು ತಾನು ಇಂಥವನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡಗೊಡಿಸಲಿಲ್ಲ.
35
ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.
36
ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹಿಂದಟ್ಟಿ ಕಂಡು -
37
ಎಲ್ಲರು ನಿನ್ನನ್ನು ಹುಡುಕುತ್ತಾರೆ ಅನ್ನಲಾಗಿ ಆತನು ಅವರಿಗೆ -
38
ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
39
ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
40
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -
41
ನನಗೆ ಮನಸ್ಸುಂಟು; ಶುದ್ಧವಾಗು ಅಂದನು.
42
ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧವಾದನು. ಆಗ ಯೇಸು ಅವನಿಗೆ - ಯಾರಿಗೂ ಏನೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಖಂಡಿತವಾಗಿ ಹೇಳಿ ಅವನನ್ನು ಕಳುಹಿಸಿಬಿಟ್ಟನು.
45
ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 2 →
All chapters:
1
2
3
4
5
6
7
8
9
10
11
12
13
14
15
16