bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Mark 10
Mark 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 11 →
1
ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
2
ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.
3
ಆತನು ಅದಕ್ಕೆ - ಮೋಶೆ ನಿಮಗೆ ಏನು ಆಜ್ಞೆಕೊಟ್ಟನು ಅನ್ನಲಾಗಿ ಅವರು -
4
ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
5
ಆದರೆ ಯೇಸು ಅವರಿಗೆ - ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥ ಆಜ್ಞೆಯನ್ನು ಬರೆದಿಟ್ಟನು.
6
ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದನೆಂತಲೂ
7
ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದದೆ.
8
ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
9
ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಎಂದು ಹೇಳಿದನು.
10
ಮನೆಯಲ್ಲಿ ಆತನ ಶಿಷ್ಯರು ಈ ವಿಷಯದಲ್ಲಿ ಆತನನ್ನು ತಿರಿಗಿ ಕೇಳಿದಾಗ ಆತನು ಅವರಿಗೆ -
11
ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ದ್ರೋಹಿಯಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
12
ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು.
13
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು.
14
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.
15
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ
16
ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
17
ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -
18
ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ.
19
ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.
20
ಅವನು ಆತನಿಗೆ - ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು
21
ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
22
ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು.
23
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಎಂದು ಹೇಳಿದನು.
24
ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
25
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು.
26
ಈ ಮಾತಿಗೆ ಅವರು ಇನ್ನಷ್ಟಾಶ್ಚರ್ಯಪಟ್ಟು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ತಮ್ಮ ತಮ್ಮೊಳಗೆ ಹೇಳಿಕೊಳ್ಳಲು
27
ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ; ದೇವರಿಗೆ ಎಲ್ಲವು ಸಾಧ್ಯವೇ ಅಂದನು.
28
ಪೇತ್ರನು ಆತನಿಗೆ - ಇಗೋ, ನಾವು ಎಲ್ಲಾ ಬಿಟ್ಟುಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳುವದಕ್ಕೆ ಪ್ರಾರಂಭಿಸಲು ಯೇಸು -
29
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ನನ್ನ ನಿವಿುತ್ತವೂ ಸುವಾರ್ತೆಯ ನಿವಿುತ್ತವೂ ಮನೆಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವನೋ
30
ಅವನಿಗೆ ಈಗಿನ ಕಾಲದಲ್ಲಿ ಮನೆ ಅಣ್ಣ ತಮ್ಮ ಅಕ್ಕ ತಂಗಿ ತಾಯಿ ಮಕ್ಕಳು ಭೂವಿು ಇವೆಲ್ಲವೂ ಹಿಂಸೆಗಳು ಸಹಿತವಾಗಿ ನೂರರಷ್ಟು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು.
31
ಆದರೆ ಬಹುಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು ಎಂದು ಹೇಳಿದನು.
32
ಅವರು ಯೆರೂಸಲೇವಿುನ ದಾರಿಯನ್ನು ಹಿಡಿದು ಹೋಗುತ್ತಿರುವಾಗ ಯೇಸು ಅವರ ಮುಂದೆ ಮುಂದೆ ಹೋಗುತ್ತಿದ್ದನು. ಅವರು [ನೋಡಿ] ಬೆರಗಾದರು; ಆತನ ಹಿಂದೆ ಬರುವವರು ಭಯಪಡುವವರಾದರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತಿರಿಗಿ ಕರೆದುಕೊಂಡು ಮುಂದೆ ತನಗಾಗುವದನ್ನು ಹೇಳುವದಕ್ಕೆ ತೊಡಗಿ ಅವರಿಗೆ -
33
ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.
34
ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.
35
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು ಆತನಿಗೆ - ಗುರುವೇ, ನಾವು ಒಂದನ್ನು ಕೇಳಿಕೊಳ್ಳುತ್ತೇವೆ; ಅದನ್ನು ನಮಗೋಸ್ಕರ ನಡಿಸಿಕೊಡಬೇಕೆಂದು ಹೇಳಿದರು.
36
ಆತನು ಅವರನ್ನು - ನಿಮಗೇನು ನಡಿಸಿಕೊಡಬೇಕು ಎಂದು ಕೇಳಲು ಅವರು -
37
ನಿನಗೆ ಮಹಾಪದವಿ ಬಂದಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಮಾಡಬೇಕು ಅಂದರು.
38
ಆದರೆ ಯೇಸು ಅವರನ್ನು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವದು ನಿಮ್ಮಿಂದಾದೀತೇ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವದು ನಿಮ್ಮಿಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.
39
ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;
40
ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕೂತುಕೊಳ್ಳುವಂತೆ ಅನುಗ್ರಹಮಾಡುವದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.
41
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
42
ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರೆನಿಸಿಕೊಳ್ಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ಅವರಲ್ಲಿ ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ;
43
ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;
44
ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಿರಬೇಕು.
45
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
46
ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.
47
ಅವನು ಕುರುಡ ಭಿಕ್ಷಗಾರನು. ಈ ಮಾರ್ಗವಾಗಿ ಹೋಗುವವನು ನಜರೇತಿನ ಯೇಸುವೆಂದು ಅವನು ಕೇಳಿ - ದಾವೀದನ ಕುಮಾರನೇ, ಯೇಸುವೇ, ನನ್ನನ್ನು ಕರುಣಿಸು ಎಂದು ಕೂಗಿಕೊಳ್ಳುವದಕ್ಕೆ ಪ್ರಾರಂಭಿಸಿದನು.
48
ಅನೇಕರು - ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.
49
ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.
50
ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
51
ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು.
52
ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 11 →
All chapters:
1
2
3
4
5
6
7
8
9
10
11
12
13
14
15
16