bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Mark 11
Mark 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 12 →
1
ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ
2
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.
3
ಯಾವನಾದರೂ ನಿಮ್ಮನ್ನು - ಏನು ಹೀಗೆ ಮಾಡುವದು ಎಂದು ಕೇಳಿದರೆ - ಇದು ಸ್ವಾವಿುಯವರಿಗೆ ಬೇಕಾಗಿದೆ, ಅವರು ತಡಮಾಡದೆ ತಿರಿಗಿ ಇಲ್ಲಿಗೆ ಕಳುಹಿಸಿಕೊಡುವರು ಅನ್ನಿರಿ ಎಂದು ಹೇಳಿ ಕಳುಹಿಸಿದನು.
4
ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು.
5
ಅಲ್ಲಿ ನಿಂತಿದ್ದವರಲ್ಲಿ ಕೆಲವರು - ಈ ಮರಿಯನ್ನು ಬಿಚ್ಚಿ ಏನು ಮಾಡುತ್ತೀರಿ? ಎಂದು ಅವರನ್ನು ಕೇಳಿದ್ದಕ್ಕೆ
6
ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು.
7
ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕೂತುಕೊಂಡನು.
8
ಆಗ ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಚಿಗುರುಗಳನ್ನು ಕೊಯಿದು ತಂದು ಹಾಸಿದರು.
9
ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
10
ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.
11
ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.
12
ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನು ಹಸಿದನು.
13
ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.
14
ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು.
15
ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು;
16
ಒಬ್ಬನನ್ನಾದರೂ ಸಾಮಾನು ಹೊತ್ತುಕೊಂಡು ದೇವಾಲಯದೊಳಗೆ ಹಾದು ಹೋಗಗೊಡಿಸಲಿಲ್ಲ.
17
ಮತ್ತು ಆತನು ಉಪದೇಶಮಾಡಿ - ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದಿದೆಯಲ್ಲಾ? ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.
18
ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
19
ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
20
ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು.
21
ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ
22
ಯೇಸು ಹೇಳಿದ್ದೇನಂದರೆ - ನಿಮಗೆ ದೇವರಲ್ಲಿ ನಂಬಿಕೆಯಿರಲಿ.
23
ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು.
24
ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವದೆಂದು ನಿಮಗೆ ಹೇಳುತ್ತೇನೆ.
25
ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.
27
ಅವರು ತಿರಿಗಿ ಯೆರೂಸಲೇವಿುಗೆ ಬಂದಾಗ ಆತನು ದೇವಾಲಯದಲ್ಲಿ ತಿರುಗಾಡುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು -
28
ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು.
29
ಯೇಸು ಅವರಿಗೆ - ನಾನು ನಿಮ್ಮನ್ನೂ ಒಂದು ಮಾತು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನು ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.
30
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ? ಮನುಷ್ಯರಿಂದ ಬಂತೋ? ಉತ್ತರಕೊಡಿರಿ ಅಂದನು.
31
ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;
32
ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು.
33
ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 12 →
All chapters:
1
2
3
4
5
6
7
8
9
10
11
12
13
14
15
16