bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Mark 16
Mark 16
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
1
ಸಬ್ಬತ್ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.
2
ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
3
ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ
4
ತಲೆಯೆತ್ತಿ ನೋಡಿ ಆ ಕಲ್ಲು ಉರುಳಿಸಲ್ಪಟ್ಟಿರುವದನ್ನು ಕಂಡರು.
5
ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.
6
ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.
7
ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.
8
ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.
9
[ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.
10
ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಮುಂಚೆ ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಇವರು ಹಂಬಲಿಸುತ್ತಾ ಅಳುತ್ತಾ ಕೂತಿದ್ದರು.
11
ಆತನು ಬದುಕಿದ್ದಾನೆ, ನನಗೆ ಕಾಣಿಸಿಕೊಂಡನು ಎಂಬ ಮಾತನ್ನು ಕೇಳಿದಾಗ ಅವರು ನಂಬಲಿಲ್ಲ.
12
ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಒಂದು ಹಳ್ಳಿಗೆ ನಡಕೊಂಡು ಹೋಗುತ್ತಿದ್ದಾಗ ಆತನು ಅವರಿಗೆ ರೂಪಾಂತರದಿಂದ ಕಾಣಿಸಿಕೊಂಡನು.
13
ಅವರು ಹೋಗಿ ಉಳಿದವರಿಗೆ ತಿಳಿಸಿದರು. ಆದರೆ ಅವರನ್ನೂ ನಂಬಲಿಲ್ಲ.
14
ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15
ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16
ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;
18
ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.
19
ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20
ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
All chapters:
1
2
3
4
5
6
7
8
9
10
11
12
13
14
15
16