bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Mark 9
Mark 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 10 →
1
ಮತ್ತು ಅವರಿಗೆ - ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬಂದಿರುವದನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಹೇಳಿದನು.
2
ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.
3
ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು.
4
ಇದಲ್ಲದೆ ಎಲೀಯನೂ ಮೋಶೆಯೂ ಅವರಿಗೆ ಕಾಣಿಸಿಕೊಂಡು ಯೇಸುವಿನ ಸಂಗಡ ಮಾತಾಡುತ್ತಿದ್ದರು.
5
ಆಗ ಪೇತ್ರನು ಯೇಸುವಿಗೆ - ಗುರುವೇ, ನಾವು ಇಲ್ಲೇ ಇರುವದು ಒಳ್ಳೇದು; ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು.
6
ಏನು ಹೇಳಬೇಕೋ ತಿಳಿಯದೆ ಹೀಗೆ ಮಾತಾಡಿದನು. ಅವರು ಬಹಳವಾಗಿ ಹೆದರಿಕೊಂಡಿದ್ದರು.
7
ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.
8
ಫಕ್ಕನೆ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಆಗಿನಿಂದ ಮತ್ತಾರನ್ನೂ ಕಾಣಲಿಲ್ಲ.
9
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ - ನೀವು ಕಂಡಿರುವದನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎದ್ದು ಬರುವತನಕ ಯಾರಿಗೂ ತಿಳಿಸಬಾರದೆಂದು ಖಂಡಿತವಾಗಿ ಹೇಳಿದನು.
10
ಅವರು ಈ ಮಾತನ್ನು ಹಿಡಿದು ಸತ್ತುಜೀವಿತನಾಗಿ ಏಳುವದಂದರೇನು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.
11
ಇದಲ್ಲದೆ ಅವರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ? ಎಂದು ಆತನನ್ನು ಕೇಳಿದ್ದಕ್ಕೆ
12
ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ?
13
ಆದರೆ ನಾನು ನಿಮಗೆ ಹೇಳುವದೇನಂದರೆ - ಎಲೀಯನು ಬಂದನು; ಮತ್ತು ಅವನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು ಅಂದನು.
14
ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.
15
ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
16
ಆತನು ಶಾಸ್ತ್ರಿಗಳನ್ನು - ಇವರ ಸಂಗಡ ಏನು ತರ್ಕಮಾಡುತ್ತೀರಿ? ಎಂದು ಕೇಳಿದ್ದಕ್ಕೆ
17
ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರಕೊಂಡು ಬಂದೆನು;
18
ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು.
19
ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು
20
ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
21
ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;
22
ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.
23
ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.
24
ಕೂಡಲೆ ಆ ಹುಡುಗನ ತಂದೆಯು - ನಂಬುತ್ತೇನೆ, ನನಗೆ ನಂಬಿಕೆ ಕಡಿಮೆಯಾಗಿದ್ದರೂ ಸಹಾಯಮಾಡು ಎಂದು ಕೂಗಿ ಹೇಳಿದನು.
25
ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.
26
ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.
27
ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಅವನು ಎದ್ದು ನಿಂತನು.
28
ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು
29
ಆತನು - ಈ ಜಾತಿಯು ದೇವರ ಪ್ರಾರ್ಥನೆ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾತರಿಂದಲೂ ಬಿಟ್ಟು ಹೋಗುವದಿಲ್ಲವೆಂದು ಅವರಿಗೆ ಹೇಳಿದನು.
30
ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಇದು ಜನರಿಗೆ ಗೊತ್ತಾಗಬಾರದೆಂದು ಆತನಿಗೆ ಮನಸ್ಸಿತ್ತು.
31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.
32
ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.
33
ಮತ್ತು ಅವರು ಕಪೆರ್ನೌವಿುಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ - ನೀವು ದಾರಿಯಲ್ಲಿ ಏನು ಮಾತಾಡಿಕೊಳ್ಳುತ್ತಿದ್ದಿರಿ ಎಂದು ಶಿಷ್ಯರನ್ನು ಕೇಳಲು ಅವರು ಸುಮ್ಮನಿದ್ದರು;
34
ಯಾಕಂದರೆ ಅವರು ದಾರಿಯಲ್ಲಿ ಒಬ್ಬರಕೂಡೊಬ್ಬರು - [ತಮ್ಮಲ್ಲಿ] ಯಾವನು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35
ಆತನು ಕೂತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ - ಯಾವನಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಆಳೂ ಆಗಿರಬೇಕು ಎಂದು ಹೇಳಿ
36
ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ನಡುವೆ ನಿಲ್ಲಿಸಿ ಅಪ್ಪಿಕೊಂಡು ಅವರಿಗೆ -
37
ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.
38
ಯೋಹಾನನು ಆತನಿಗೆ - ಬೋಧಕನೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಲಾಗಿ ಯೇಸು -
39
ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನ ಮೇಲೆ ಮಹತ್ತನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
40
ನಮ್ಮನ್ನು ಎದುರಿಸದವನು ನಮ್ಮ ಪಕ್ಷದವನೇ.
41
ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
42
ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.
43
ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.
45
ಮತ್ತು ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಕಾಲುಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ.
47
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಡು; ಎರಡು ಕಣ್ಣುಳ್ಳವನಾಗಿದ್ದು ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ದೇವರ ರಾಜ್ಯದಲ್ಲಿ ಸೇರುವದು ನಿನಗೆ ಉತ್ತಮ.
48
ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯುವದಿಲ್ಲ, ಬೆಂಕಿ ಆರುವದಿಲ್ಲ.
49
ಪ್ರತಿಯೊಬ್ಬನಿಗೂ ಬೆಂಕಿಯೆಂಬ ಉಪ್ಪಿನ ಹದವು ಕೊಡಲ್ಪಡಬೇಕು.
50
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 10 →
All chapters:
1
2
3
4
5
6
7
8
9
10
11
12
13
14
15
16