bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 10
Matthew 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 11 →
1
ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.
2
ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ,
3
ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,
4
ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಇವುಗಳೇ.
5
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;
6
ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ.
7
ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ.
8
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
9
ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ
10
ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.
11
ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.
12
ಆ ಮನೆಯೊಳಕ್ಕೆ ಹೋಗುವಾಗ ಶುಭವಾಗಲಿ ಅನ್ನಿರಿ.
13
ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ಅವರಿಗೆ ಆಗಲಿ; ಅಯೋಗ್ಯರಾಗಿದ್ದರೆ ನಿಮ್ಮ ಆಶೀರ್ವಾದವು ನಿಮಗೆ ಹಿಂದಕ್ಕೆ ಬರಲಿ.
14
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.
15
ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
16
ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.
17
ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
18
ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
19
ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.
20
ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು.
21
ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
22
ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.
23
ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
24
ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಧಣಿಗಿಂತ ಆಳು ದೊಡ್ಡವನಲ್ಲ.
25
ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.
26
ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.
27
ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
28
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
29
ದುಡ್ಡಿಗೆ ಎರಡು ಗುಬ್ಬಿಗಳನ್ನು ಮಾರುವದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಒಂದಾದರೂ ನೆಲಕ್ಕೆ ಬೀಳದು.
30
ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
31
ಆದದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
32
ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
33
ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
34
ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.
35
ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದ ಹುಟ್ಟಿಸುವದಕ್ಕೆ ಬಂದೆನು.
36
ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
37
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
38
ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನ ಹಿಂದೆ ಬಂದ ಹೊರತು ನನಗೆ ಯೋಗ್ಯನಲ್ಲ.
39
ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.
40
ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.
41
ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
42
ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28