bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 11
Matthew 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 12 →
1
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.
2
ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -
3
ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.
4
ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ.
6
ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.
7
ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
8
ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.
9
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.
10
ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಇವನೇ.
11
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
12
ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.
13
ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು.
14
ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ.
15
ಕಿವಿಯುಳ್ಳವನು ಕೇಳಲಿ.
16
ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ -
17
ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ. ಗೋಳಾಡಿದೆವು, ನೀವು ಎದೆಬಡಕೊಳ್ಳಲಿಲ್ಲ ಎಂದು ಕೂಗಿಹೇಳುವಂಥ ಹುಡುಗರನ್ನು ಹೋಲುತ್ತದೆ.
18
ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.
19
ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.
20
ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
21
ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.
22
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ.
23
ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.
24
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿನ್ನ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ ಅಂದನು.
25
ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.
26
ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
27
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.
28
ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.
29
ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;
30
ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28