bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 12
Matthew 12
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 13 →
1
ಆ ಕಾಲದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದು ತೆನೆಗಳನ್ನು ಮುರುಕೊಂಡು ತಿನ್ನುತ್ತಿದ್ದರು.
2
ಫರಿಸಾಯರು ಅದನ್ನು ಕಂಡು - ನೋಡು, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು.
3
ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?
4
ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.
5
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ವಿುಕ್ಕಾದ ದಿನಗಳಂತೆ ಮಾಡಿದಾಗ್ಯೂ ಅವರು ತಪ್ಪಿಗೆ ಗುರಿಯಾಗುವದಿಲ್ಲ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
6
ಆದರೆ ಇಲ್ಲಿ ದೇವಾಲಯಕ್ಕಿಂತ ಹೆಚ್ಚಿನವನು ಇದ್ದಾನೆಂದು ನಿಮಗೆ ಹೇಳುತ್ತೇನೆ. ನನಗೆ ಯಜ್ಞವು ಬೇಡ,
7
ಕರುಣೆಯೇಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪು ಮಾಡುತ್ತಿದ್ದಿಲ್ಲ.
8
ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ ಎಂದು ಹೇಳಿದನು.
9
ಆತನು ಅಲ್ಲಿಂದ ಹೊರಟು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈಬತ್ತಿದ್ದವನೊಬ್ಬನಿದ್ದನು.
10
ಆಗ ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆತನನ್ನು - ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ಸರಿಯೋ ಎಂದು ಕೇಳಿದರು.
11
ಅದಕ್ಕಾತನು - ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ತೆಗೆಯದೆ ಇರುವನೇ?
12
ಕುರಿಗಿಂತ ಮನುಷ್ಯನು ಎಷ್ಟೋ ಹೆಚ್ಚು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೇ ಕೆಲಸ ಮಾಡುವದು ತಕ್ಕದ್ದೇ ಸರಿ ಎಂದು ಉತ್ತರಕೊಟ್ಟು ಆ ಮನುಷ್ಯನಿಗೆ -
13
ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.
14
ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.
15
ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.
16
ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
17
ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ -
18
ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
19
ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ.
20
ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.
21
ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.
22
ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.
23
ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.
24
ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.
25
ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು.
26
ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು.
27
ಹಾಗಾದರೆ ಅವನ ರಾಜ್ಯವು ಹೇಗೆ ಉಳಿದೀತು? ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.
28
ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.
29
ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
30
ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
31
ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ.
32
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅದು ಅವನಿಗೆ ಕ್ಷವಿುಸಲ್ಪಡುವದು; ಪವಿತ್ರಾತ್ಮನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಇಹದಲ್ಲಾಗಲಿ ಪರದಲ್ಲಾಗಲಿ ಕ್ಷವಿುಸಲ್ಪಡುವದಿಲ್ಲ.
33
ಮರ ಒಳ್ಳೇದಂದರೆ ಅದರ ಫಲವೂ ಒಳ್ಳೇದನ್ನಿರಿ. ಮರ ಹುಳುಕು ಅಂದರೆ ಅದರ ಫಲವೂ ಹುಳುಕು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವದು.
34
ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.
35
ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.
36
ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.
37
ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು.
38
ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು - ಬೋಧಕನೇ, ನಿನ್ನಿಂದಾಗುವ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು ನಮಗೆ ಅಪೇಕ್ಷೆಯದೆ ಎಂದು ಆತನನ್ನು ಕೇಳಲಾಗಿ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -
39
ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.
40
ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.
41
ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.
42
ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.
43
ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
44
ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ತಿರಿಗಿ ಹೋಗುತ್ತೇನೆ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ ಗುಡಿಸಿ ಅಲಂಕರಿಸಿದ್ದೂ ಆಗಿರುವದನ್ನು ಕಂಡು ಹೊರಟುಹೋಗಿ
45
ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.
46
ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.
47
ಆಗ ಒಬ್ಬನು - ಇಗೋ, ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿರುತ್ತಾರೆ ಅಂದನು.
48
ಅದಕ್ಕಾತನು ಆ ಮಾತು ಹೇಳಿದವನಿಗೆ - ನನಗೆ ತಾಯಿ ಯಾರು? ನನಗೆ ಸಹೋದರರು ಯಾರು? ಎಂದು ಹೇಳಿ,
49
ಶಿಷ್ಯರ ಕಡೆಗೆ ಕೈ ತೋರಿಸಿ - ಇಗೋ, ನನ್ನ ತಾಯಿ, ನನ್ನ ಸಹೋದರರು.
50
ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28