bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 14
Matthew 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 15 →
1
ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ
2
ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.
3
ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.
4
ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.
5
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].
6
ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ
7
ಅವನು ಅವಳಿಗೆ - ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಮಾಡಿ ಮಾತುಕೊಟ್ಟನು.
8
ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು.
9
ಆ ಮಾತಿಗೆ ಅರಸನು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಸಂಗಡ ಪಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅದನ್ನು ತಂದುಕೊಡುವದಕ್ಕೆ ಅಪ್ಪಣೆಕೊಟ್ಟನು.
10
ಮತ್ತು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
11
ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು.
12
ಯೋಹಾನನ ಶಿಷ್ಯರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಯೇಸುವಿನ ಬಳಿಗೆ ಬಂದು ತಿಳಿಸಿದರು.
13
ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.
14
ಆತನು ಹೊರಗೆ ಬಂದು ಬಹು ಜನರ ಗುಂಪನ್ನು ಕಂಡು ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
15
ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು - ಇದು ಅಡವಿ, ಈಗ ಹೊತ್ತು ಹೋಯಿತು; ಈ ಗುಂಪಿಗೆ ಅಪ್ಪಣೆ ಕೊಡು; ಅವರು ಹಳ್ಳಿಪಳ್ಳಿಗಳಿಗೆ ಹೋಗಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳಲಿ ಎಂದು ಹೇಳಲಾಗಿ
16
ಯೇಸು - ಅವರು ಹೋಗುವದು ಅಗತ್ಯವಿಲ್ಲ; ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು.
17
ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ
18
ಆತನು - ಅವುಗಳನ್ನು ಇಲ್ಲಿ ನನಗೆ ತಂದುಕೊಡಿರಿ ಅಂದನು.
19
ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.
20
ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
21
ಊಟಮಾಡಿದವರು ಹೆಂಗಸರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ.
22
ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.
23
ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು.
24
ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು.
25
ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದನು.
26
ಸಮುದ್ರದ ಮೇಲೆ ನಡೆಯುವ ಆತನನ್ನು ಶಿಷ್ಯರು ನೋಡಿ ಭೂತವೆಂದು ತತ್ತರಿಸಿ ಭಯದಿಂದ ಕೂಗಿದರು.
27
ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.
28
ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು.
29
ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
30
ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.
31
ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.
32
ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
33
ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.
34
ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿದರು.
35
ಆ ಸ್ಥಳದವರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ಆತನ ಬಳಿಗೆ ಕರತರಿಸಿ
36
ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28