bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 28
Matthew 28
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
1
ಸಬ್ಬತ್ದಿನ ಆದ ಮೇಲೆ ವಾರದ ಮೊದಲನೆಯ ದಿವಸ ಬೆಳಗಾಗುವಾಗ ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಸಮಾಧಿಯನ್ನು ನೋಡುವದಕ್ಕೆ ಬಂದರು.
2
ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.
3
ಅವನ ಮುಖಭಾವವು ವಿುಂಚಿನಂತೆ ಇತ್ತು, ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
4
ಕಾವಲುಗಾರರು ಅವನಿಗೆ ಹೆದರಿ ನಡುಗಿ ಸತ್ತವರ ಹಾಗಾದರು.
5
ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;
6
ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;
7
ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.
8
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.
9
ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.
10
ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.
11
ಅವರು ಹೋಗುತ್ತಿರುವಾಗ ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
12
ಇವರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು -
13
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿರುವಾಗ ಅವನನ್ನು ಕದ್ದುಕೊಂಡು ಹೋದರು ಎಂದು ಹೇಳಿರಿ;
14
ಈ ಸುದ್ದಿ ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ಭಯವಿಲ್ಲದ ಹಾಗೆ ಮಾಡುತ್ತೇವೆ ಅಂದರು.
15
ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.
16
ಬಳಿಕ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ ಯೇಸು ತಮಗೆ ಗೊತ್ತು ಮಾಡಿದ್ದ ಬೆಟ್ಟಕ್ಕೆ ಸೇರಿದರು.
17
ಅಲ್ಲಿ ಆತನನ್ನು ಕಂಡು ಆತನಿಗೆ ಅಡ್ಡಬಿದ್ದರು; ಆದರೆ ಕೆಲವರು ಸಂದೇಹಪಟ್ಟರು.
18
ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
19
ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ
20
ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28