bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 5
Matthew 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 6 →
1
ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
2
ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನಂದರೆ -
3
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.
4
ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.
5
ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.
6
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.
7
ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.
8
ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.
9
ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.
10
ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು.
11
ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
12
ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.
13
ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.
14
ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.
15
ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.
16
ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
17
ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ವಚನಗಳನ್ನಾಗಲಿ ತೆಗೆದುಹಾಕುವದಕ್ಕೆ ನಾನು ಬಂದೆನೆಂದು ನೆನಸಬೇಡಿರಿ. ತೆಗೆದುಹಾಕುವದಕ್ಕೆ ಬಂದಿಲ್ಲ; ನೆರವೇರಿಸುವದಕ್ಕೆ ಬಂದಿದ್ದೇನೆ.
18
ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.
19
ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.
20
ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
21
ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
22
ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.
23
ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವದೆ ಎಂಬದು ನಿನ್ನ ನೆನಪಿಗೆ ಬಂದರೆ,
24
ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
25
ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.
26
ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27
ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.
28
ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.
29
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
30
ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
31
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ತ್ಯಾಗಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
32
ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.
33
ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
34
ಆದರೆ ನಾನು ನಿಮಗೆ ಹೇಳುವದೇನಂದರೆ - ಆಣೆಯನ್ನೇ ಇಡಬೇಡ. ಆಕಾಶದ ಮೇಲೆ ಆಣೆ ಇಡಬೇಡ; ಅದು ದೇವರ ಸಿಂಹಾಸನವು.
35
ಭೂವಿುಯ ಮೇಲೆ ಆಣೆ ಇಡಬೇಡ; ಅದು ಆತನ ಪಾದಪೀಠವು. ಯೆರೂಸಲೇವಿುನ ಮೇಲೆ ಆಣೆ ಇಡಬೇಡ; ಅದು ಆ ದೊಡ್ಡ ಅರಸನ ಪಟ್ಟಣವಾಗಿದೆ.
36
ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ.
37
ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.
38
ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗಿಸು ಅಂತ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
39
ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.
40
ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತಕ್ಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಡು.
41
ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು.
42
ನಿನ್ನನ್ನು ಬೇಡುವವನಿಗೆ ಕೊಡು; ನಿನ್ನಲ್ಲಿ ಕಡಾ ಈಸಿಕೊಳ್ಳಬೇಕೆಂದು ಬಂದವನಿಗೆ ಮುಖತಿರುವಿಕೊಳ್ಳಬೇಡ.
43
ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.
44
ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.
45
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.
46
ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ.
47
ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ.
48
ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28