bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 8
Matthew 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 9 →
1
ಆತನು ಬೆಟ್ಟದಿಂದಿಳಿದು ಬರುವಾಗ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.
2
ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.
3
ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
4
ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
5
ಆತನು ಕಪೆರ್ನೌವಿುಗೆ ಬಂದಾಗ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು -
6
ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು.
7
ಆತನು ಅವನಿಗೆ - ನಾನು ಬಂದು ಅವನನ್ನು ವಾಸಿಮಾಡುತ್ತೇನೆ ಎಂದು ಹೇಳಿದ್ದಕ್ಕೆ
8
ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.
9
ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.
10
ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
11
ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;
12
ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.
13
ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
14
ತರುವಾಯ ಯೇಸು ಪೇತ್ರನ ಮನೆಗೆ ಬಂದು ಅವನ ಅತ್ತೆ ಜ್ವರದಲ್ಲಿ ಬಿದ್ದಿರುವದನ್ನು ಕಂಡು ಆಕೆಯ ಕೈಯನ್ನು ಮುಟ್ಟಿದನು.
15
ಮುಟ್ಟಿದಾಗಲೇ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
16
ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು.
17
ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.
18
ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು.
19
ಆಗ ಒಬ್ಬ ಶಾಸ್ತ್ರಿಯು ಹತ್ತರಕ್ಕೆ ಬಂದು ಆತನಿಗೆ - ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು
20
ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.
21
ಶಿಷ್ಯರಲ್ಲಿ ಬೇರೊಬ್ಬನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅನ್ನಲಾಗಿ
22
ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.
23
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನ ಹಿಂದೆ ಹೋದರು.
24
ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲಕಲ್ಲೋಲವಾಗಿ ದೋಣಿಯು ತೆರೆಗಳಿಂದ ಮುಚ್ಚಿಹೋಯಿತು; ಆದರೆ ಆತನು ನಿದ್ದೆ ಹತ್ತಿ ಮಲಗಿದ್ದನು.
25
ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ
26
ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.
27
ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.
28
ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.
29
ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.
30
ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.
31
ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.
32
ಆತನು - ಹೋಗಿರಿ ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಣುಗಿ ಸತ್ತುಹೋಯಿತು.
33
ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದನ್ನೆಲ್ಲಾ ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು
34
ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28