bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Micah 3
Micah 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 4 →
1
ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.
2
ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;
3
ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
4
ಇಷ್ಟೆಲ್ಲಾ ನಡಿಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು; ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವನು.
5
ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -
6
ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;
7
ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.
8
ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
9
ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,
10
ಚೀಯೋನನ್ನು ನರಹತ್ಯದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕೇಳಿರಿ, ಕೇಳಿರಿ!
11
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.
12
ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 4 →
All chapters:
1
2
3
4
5
6
7