bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Micah 4
Micah 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 5 →
1
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.
2
ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.
3
ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು; ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.
4
ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.
5
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.
6
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;
7
ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.
8
ಹಿಂಡಿಗೆ ರಕ್ಷಕವಾದ ಹೂಡೆಯೇ, ಚೀಯೋನ್ ಯುವತಿಯ ಗುಡ್ಡವೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವದು, ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವದು.
9
ನೀನೀಗ ಅರಚಿಕೊಳ್ಳುವದೇಕೆ? ಪ್ರಸವವೇದನೆಯಷ್ಟು ಕಠಿನವಾದ ಯಾತನೆಯು ನಿನ್ನನ್ನು ಹಿಡಿದದ್ದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?
10
ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು; ನೀನೀಗ ಪಟ್ಟಣದೊಳಗಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ; ಅಲ್ಲೇ ನಿನಗೆ ಉದ್ಧಾರವಾಗುವದು, ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
11
[ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ.
12
ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.
13
ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 5 →
All chapters:
1
2
3
4
5
6
7