bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Micah 5
Micah 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 6 →
1
ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
2
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.
3
ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.
4
ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
5
ಆತನೇ, [ನಮಗೆ] ಸಮಾಧಾನಪ್ರದನು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಅರಮನೆಗಳನ್ನು ತುಳಿದುಹಾಕುವಾಗ ನಾವು ಅವರಿಗೆ ವಿರುದ್ಧವಾಗಿ ಏಳು ಮಂದಿ ಪಾಲಕರನ್ನು, ಹೌದು, ಎಂಟು ಮಂದಿ ಪುರುಷಶ್ರೇಷ್ಠರನ್ನು ಏರ್ಪಡಿಸುವೆವು.
6
ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
7
ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.
8
ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.
9
[ಯಾಕೋಬೇ,] ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ, ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.
10
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;
11
ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು;
12
ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು, ನಿನ್ನಲ್ಲಿ ಕಣಿಯವರು ಇನ್ನಿರರು;
13
ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.
14
ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
15
ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 6 →
All chapters:
1
2
3
4
5
6
7