bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Nahum 1
Nahum 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 2 →
1
ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.
2
ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
3
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.
4
ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.
5
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.
6
ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
7
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.
8
ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
9
ನೀವು ಯೆಹೋವನಿಗೆ ವಿರುದ್ಧವಾಗಿ ಯಾವ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಪೂರಾ ಹಾಳುಮಾಡುವನು; ಅಪಾಯವು ಎರಡನೆಯ ಸಲ ಉಂಟಾಗಬೇಕಾಗಿಲ್ಲ.
10
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.
11
[ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
12
ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.
13
ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು.
14
[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,
15
ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.
Jump to:
Chapter 1
Chapter 2
Chapter 3
Chapter 2 →
All chapters:
1
2
3