bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Nahum 2
Nahum 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 3 →
1
[ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.
2
(ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)
3
ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ.
4
ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನದಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ವಿುಂಚುಗಳ ಹಾಗೆ ಹಾರುತ್ತವೆ.
5
[ಪಟ್ಟಣದ] ಅರಸನು ತನ್ನ ಸರದಾರರನ್ನು ಸ್ಮರಿಸುತ್ತಾನೆ; ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆಗೆ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.
6
ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ.
7
ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.
8
ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.
9
ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ.
10
ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.
11
ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
12
ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಹಿಸುಕುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಹಕ್ಕೆಗಳನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
13
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.
← Chapter 1
Jump to:
Chapter 1
Chapter 2
Chapter 3
Chapter 3 →
All chapters:
1
2
3