bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Nehemiah 1
Nehemiah 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 2 →
1
ಹಕಲ್ಯನ ಮಗನಾದ ನೆಹೆಮೀಯನ ಮಾತುಗಳು - ಇಪ್ಪತ್ತನೆಯ ವರುಷದ ಮಾರ್ಗಶೀರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ
2
ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ
3
ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.
4
ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
5
ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
6
ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.
7
ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಕೊಳ್ಳಲಿಲ್ಲ.
8
ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;
9
ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.
10
ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.
11
ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 2 →
All chapters:
1
2
3
4
5
6
7
8
9
10
11
12
13