bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Nehemiah 4
Nehemiah 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 5 →
1
ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ
2
ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.
3
ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.
4
ನಮ್ಮ ದೇವರೇ ಕೇಳು; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆ ಹೋಗುವಂತೆ ಮಾಡು.
5
ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.
6
ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.
7
ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -
8
ನಾವು ಒಟ್ಟಾಗಿ ಯೆರೂಸಲೇವಿುನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
9
ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.
10
ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.
11
ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು.
12
ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ - ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ತಿಳಿಸಿದ್ದರಿಂದ
13
ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ
14
ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.
15
ನಮ್ಮ ಶತ್ರುಗಳು ತಮ್ಮ ಹಂಚಿಕೆಯು ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥ ಮಾಡಿದನೆಂದೂ ತಿಳಿದುಕೊಂಡಾಗ [ಅವರು ನಮ್ಮನ್ನು ಬಿಟ್ಟು ಹೋದರು;] ನಾವೆಲ್ಲರೂ ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ತಿರಿಗಿ ಹೋದೆವು.
16
ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು; ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ ಗುರಾಣಿ ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು.
17
ಅದೇ ಪ್ರಕಾರ ಪ್ರಭುಗಳೂ ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.
18
ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡು
19
ಶ್ರೀಮಂತರಿಗೂ ಅಧಿಕಾರಿಗಳಿಗೂ ಉಳಿದ ಜನರಿಗೂ - ನಾವು ಮಾಡುವ ಕೆಲಸವು ಬಲುದೊಡ್ಡದೂ ಅನೇಕ ಸ್ಥಳಗಳಲ್ಲಿ ನಡೆಯುವಂಥದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.
20
ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಬರುವದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.
21
ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು; [ನನ್ನ ಸೇವಕರಲ್ಲಿ] ಅರ್ಧ ಮಂದಿ ಬರ್ಜಿ ಹಿಡಿದುಕೊಂಡಿದ್ದರು.
22
ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ - ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವ ಹಾಗೂ ಹಗಲಿನಲ್ಲಿ ಕೆಲಸ ನಡಿಸುವ ಹಾಗೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇವಿುನಲ್ಲೇ ವಾಸಮಾಡಬೇಕು ಎಂದು ಅಪ್ಪಣೆ ಮಾಡಿದೆನು.
23
ನಾನೂ ನನ್ನ ಸಹೋದರರೂ ಸೇವಕರೂ ಮೈಗಾವಲಿನವರೂ ಸ್ನಾನಸಮಯದಲ್ಲಿ ಹೊರತು ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 5 →
All chapters:
1
2
3
4
5
6
7
8
9
10
11
12
13