bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Nehemiah 8
Nehemiah 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
1
ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.
2
ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ
3
ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.
4
ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು.
5
ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
6
ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.
7
ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.
8
ಜನರು ಎದ್ದು ನಿಂತನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿಲು ಜನರು ಗ್ರಹಿಸಿದರು.
9
ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.
10
ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.
11
ಲೇವಿಯರೂ - ಸುಮ್ಮನಿರಿ, ಇದು ದೇವರ ದಿವಸ, ದುಃಖಿಸಬೇಡಿರಿ ಎಂದು ಹೇಳಿ ಜನರನ್ನು ಸಂತೈಸಿದರು.
12
ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
13
ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದಾಗ
14
ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸಿಸಬೇಕು;
15
ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇವಿುನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.
16
ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
17
ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು.
18
ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
All chapters:
1
2
3
4
5
6
7
8
9
10
11
12
13