bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 1
Numbers 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
1
ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -
2
ಇಸ್ರಾಯೇಲ್ಯರ ಸರ್ವಸಮೂಹದ ಗಂಡಸರನ್ನು ಗೋತ್ರ ಕುಟುಂಬಗಳ ಪ್ರಕಾರ ಹೆಸರುಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.
3
ಇಸ್ರಾಯೇಲ್ಯರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಿಸಬೇಕು.
4
ಈ ಕೆಲಸಕ್ಕಾಗಿ ಒಂದೊಂದು ಕುಲದಲ್ಲಿ ಆಯಾ ಕುಲದ ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು.
5
ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
6
ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
7
ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8
ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9
ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
10
ಯೋಸೇಫನ ವಂಶದವರಲ್ಲಿ - ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11
ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
12
ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13
ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14
ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15
ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರನು.
16
ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು.
17
ಹೆಸರಿನಿಂದ ಸೂಚಿತರಾದ ಪುರುಷರನ್ನು ಮೋಶೆ ಆರೋನರು ಕರೆದು
18
ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು.
19
ಹೀಗೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಿಸಿದನು.
20
ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 46,500 ಮಂದಿ.
22
ಸಿಮೆಯೋನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 59,300 ಮಂದಿ.
24
ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 45,650 ಮಂದಿ.
26
ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 74,600 ಮಂದಿ.
28
ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 54,400 ಮಂದಿ.
30
ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 57,400 ಮಂದಿ.
32
ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.
34
ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 32,200 ಮಂದಿ.
36
ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 35,400 ಮಂದಿ.
38
ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 62,700 ಮಂದಿ.
40
ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 41,500 ಮಂದಿ.
42
ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 53,400 ಮಂದಿ.
44
ಮೋಶೆ ಆರೋನರೂ ಕುಲಪ್ರತಿನಿಧಿಗಳಾದ ಆ ಹನ್ನೆರಡುಮಂದಿ ಪ್ರಾಧಾನರೂ ಲೆಕ್ಕಿಸಿದ ಇಸ್ರಾಯೇಲ್ಯರು ಇಷ್ಟು ಜನ.
45
ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರ ಒಟ್ಟಾದ ಸಂಖ್ಯೆ … 603,550.
47
ಆದರೆ ಅವರೊಡನೆ ಲೇವಿಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.
48
ಯಾಕಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -
49
ನೀನು ಇಸ್ರಾಯೇಲ್ಯರನ್ನು ಎಣಿಸುವಾಗ ಲೇವಿಯರನ್ನು ಎಣಿಸಬಾರದು.
50
ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವದಕ್ಕೆ ಅವರನ್ನು ನೇವಿುಸಬೇಕು. ಅವರು ಆ ಗುಡಾರವನ್ನೂ ಅದರ ಸಾಮಾನನ್ನೂ ಹೊರುವದಕ್ಕಾಗಿ ಇರಬೇಕು. ಮತ್ತು ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
51
ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52
ಇಸ್ರಾಯೇಲ್ಯರೆಲ್ಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
53
ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.
54
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36