bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 21
Numbers 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 22 →
1
ಕಾನಾನ್ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
2
ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.
3
ಯೆಹೋವನು ಆ ಪ್ರಾರ್ಥನೆಯನ್ನು ಕೇಳಿ ಇಸ್ರಾಯೇಲ್ಯರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಲಾಗಿ ಅವರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಶೇಷವಾಗಿ ನಾಶಮಾಡಿಬಿಟ್ಟರು. ಆದದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.
4
ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.
5
ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.
6
ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು.
7
ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.
8
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.
9
ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
10
ತರುವಾಯ ಇಸ್ರಾಯೇಲ್ಯರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11
ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇಅಬಾರೀವಿುನಲ್ಲಿ ಇಳಿದುಕೊಂಡರು.
12
ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
13
ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೇ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಮೇರೆಯಾಗಿದೆ.
14
ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ
15
ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ [ದಾಟಿದ್ದಾಯಿತು] ಎಂದು ಬರೆದದೆ.
16
ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ.
17
ಆ ಕಾಲದಲ್ಲಿ ಇಸ್ರಾಯೇಲ್ಯರು ಈ ಹಾಡನ್ನು ಗಾನಮಾಡಿದರು; ಏನೆಂದರೆ - ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ.
18
ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ.
19
ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು.
20
ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ.
21
ಇಸ್ರಾಯೇಲ್ಯರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ -
22
ನಿನ್ನ ದೇಶವನ್ನು ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷೇತೋಟಗಳಲ್ಲಿಯಾಗಲಿ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು ಎಂದು ಹೇಳಿಸಿದರು.
23
ಆದರೆ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಸೀಹೋನನು ಇಸ್ರಾಯೇಲ್ಯರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವದಕ್ಕೆ ಅರಣ್ಯಕ್ಕೆ ಹೊರಟು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
24
ಇಸ್ರಾಯೇಲ್ಯರು ಅವನ ಜನರನ್ನು ಸೋಲಿಸಿ ಕತ್ತಿಯಿಂದ ಸಂಹರಿಸಿ ಅರ್ನೋನ್ಹೊಳೆ ಮೊದಲುಗೊಂಡು ಯಬ್ಬೋಕ್ ಹೊಳೆಯವರೆಗೂ ಅಮ್ಮೋನಿಯರ ಮೇರೆಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅಮ್ಮೋನಿಯರ ಮೇರೆ ಬಲವುಳ್ಳದ್ದಾಗಿತ್ತು.
25
ಇಸ್ರಾಯೇಲ್ಯರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
26
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
27
ಕವಿಗಳು ಹೇಳಿದ ಪದ್ಯವು ಇದರ ವಿಷಯವಾದದ್ದೇ; ಅದೇನಂದರೆ - ಹೆಷ್ಬೋನಿಗೆ ಬಂದು ಅದನ್ನು [ಹೊಸತಾಗಿ] ಕಟ್ಟಬೇಕು; ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು;
28
ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿಜ್ವಾಲೆಹೊರಟು ಮೋವಾಬ್ಯರ ರಾಜಧಾನಿಯಾದ ಆರ್ ಎಂಬಪಟ್ಟಣವನ್ನೂ ಅರ್ನೋನ್ ಹೊಳೆಯ ಬಳಿಯಲ್ಲಿರುವ ಪೂಜಾಸ್ಥಳಗಳ ದೇವತೆಗಳನ್ನೂ ದಹಿಸಿಬಿಟ್ಟಿತು.
29
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ; ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತಲ್ಲಾ. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30
ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.
31
ಹೀಗೆ ಇಸ್ರಾಯೇಲ್ಯರಿಗೆ ಅಮ್ಮೋನಿಯರ ದೇಶದಲ್ಲಿ ನಿವಾಸವುಂಟಾಯಿತು.
32
ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
33
ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.
34
ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು.
35
ಆದಕಾರಣ ಇಸ್ರಾಯೇಲ್ಯರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಒಬ್ಬರಾದರೂ ಉಳಿಯದಂತೆ ಹತಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36