bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 22
Numbers 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 23 →
1
ತರುವಾಯ ಇಸ್ರಾಯೇಲ್ಯರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.
2
ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಅರಸನಾಗಿದ್ದನು. ಇಸ್ರಾಯೇಲ್ಯರು ಅಮೋರಿಯರನ್ನು ಸಂಹಾರಮಾಡಿದ ವರ್ತಮಾನವು ಅವನಿಗೆ ತಿಳಿದುಬಂದಾಗ
3
ಇಸ್ರಾಯೇಲ್ಯರು ಬಹು ಮಂದಿಯಾದದರಿಂದ ಮೋವಾಬ್ಯರು ಬಲು ದಿಗಿಲುಪಟ್ಟರು. ಅವರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾಗಿ ವಿುದ್ಯಾನ್ಯರ ಹಿರಿಯರಿಗೆ -
4
ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.
5
ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.
6
ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.
7
ಮೋವಾಬ್ಯರ ಹಿರಿಯರೂ ವಿುದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದಾಗ ಅವನು -
8
ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
9
ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು -
10
ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ -
11
ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
12
ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.
13
ಬೆಳಿಗ್ಗೆ ಬಿಳಾಮನು ಬಾಲಾಕನ ಪ್ರಧಾನರಿಗೆ - ನಾನು ನಿಮ್ಮ ಜೊತೆಯಲ್ಲಿ ಬರುವದಕ್ಕೆ ಯೆಹೋವನ ಅಪ್ಪಣೆಯಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ
14
ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು - ಬಿಳಾಮನು ಬರಲೊಲ್ಲನು ಎಂದು ತಿಳಿಸಿದರು.
15
ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚುಮಂದಿ ಪ್ರಧಾನರನ್ನು ಕಳುಹಿಸಿದನು.
16
ಇವರು ಬಿಳಾಮನ ಬಳಿಗೆ ಬಂದು ಅವನಿಗೆ - ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ;
17
ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.
18
ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
19
ಆದದರಿಂದ ನೀವೂ ಕೂಡ ಈ ರಾತ್ರಿ ಇಲ್ಲೇ ಇರ್ರಿ; ಯೆಹೋವನು ಈಗ ಏನು ಹೇಳುವನೋ ಅದನ್ನು ನಾನು ತಿಳಿದುಕೊಳ್ಳುತ್ತೇನೆ ಎಂದು ಬಾಲಾಕನ ಸೇವಕರಿಗೆ ಉತ್ತರಕೊಟ್ಟನು.
20
ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು - ಆ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿರುವದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು ಅಂದನು.
21
ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
22
ಅವನು ಹೋದದರಿಂದ ದೇವರಿಗೆ ಕೋಪವುಂಟಾಯಿತು; ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23
ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಕಡೆ ಹೋಯಿತು; ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು.
24
ಆಮೇಲೆ ಯೆಹೋವನ ದೂತನು ದ್ರಾಕ್ಷೇತೋಟಗಳ ಸಂದಿನಲ್ಲಿ ನಿಂತುಕೊಂಡನು; ಎರಡು ಕಡೆಯಲ್ಲಿಯೂ ಗೋಡೆಯಿತ್ತು.
25
ಕತ್ತೆ ಯೆಹೋವನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರಿಗಿ ಹೊಡೆದನು.
26
ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
27
ಕತ್ತೆಯು ಅವನನ್ನು ನೋಡಿ ಬಿಳಾಮನ ಕೆಳಗೇ ಅಣಗಿಕೊಂಡಾಗ ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಹೊಡೆದನು.
28
ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು - ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ; ನಾನು ನಿನಗೇನು ಮಾಡಿದ್ದೇನೆ ಎಂದು ಕೇಳಿತು.
29
ಅದಕ್ಕೆ ಬಿಳಾಮನು - ನೀನು ಇಷ್ಟಬಂದಂತೆ ನನ್ನನ್ನು ಆಡಿಸಿದಿಯಲ್ಲಾ; ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದುಹಾಕಿ ಬಿಡುತ್ತಿದ್ದೆ ಅಂದನು.
30
ಅದಕ್ಕೆ ಆ ಕತ್ತೆ - ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ; ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ ಅಂದಾಗ ಬಿಳಾಮನು ಇಲ್ಲವೆಂದನು.
31
ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.
32
ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ.
33
ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಒತ್ತಟ್ಟಿಗೆ ತಿರುಗಿಕೊಂಡಿತು; ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಕೊಂದುಹಾಕಿಬಿಡುತ್ತಿದ್ದೆನು ಎಂದು ಹೇಳಿದನು.
34
ಅದಕ್ಕೆ ಬಿಳಾಮನು - ನಾನು ಪಾಪಮಾಡಿದ್ದೇನೆ; ನೀನೇ ನನಗೆದುರಾಗಿ ದಾರಿಯಲ್ಲಿ ನಿಂತಿರುವದು ನನಗೆ ತಿಳಿಯಲಿಲ್ಲ; ನಾನು ಮಾಡುವದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ ಅಂದಾಗ
35
ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು.
36
ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವದಕ್ಕಾಗಿ ತನ್ನ ದೇಶದ ಮೇರೆಯಾದ ಅರ್ನೋನ್ ಹೊಳೆಯ ತೀರದಲ್ಲಿ ಇರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
37
ಬಾಲಾಕನು ಬಿಳಾಮನನ್ನು ಕಂಡಾಗ - ನಿನ್ನನ್ನು ಅವಸರದಿಂದ ಕರಿಸುವದಕ್ಕೆ ದೂತರನ್ನು ಕಳುಹಿಸಿದೆನಲ್ಲಾ; ನೀನು ಯಾಕೆ ಆಗಲೇ ಬರಲಿಲ್ಲ; ನಿನ್ನನ್ನು ಘನಪಡಿಸುವದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ? ಎಂದು ಹೇಳಿದ್ದಕ್ಕೆ
38
ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.
39
ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು; ಅವರು ಕಿರ್ಯತ್ಹುಚೋತಿಗೆ ಬಂದರು.
40
ಬಾಲಾಕನು ಹೋರಿಗಳನ್ನೂ ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
41
ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36