bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 31
Numbers 31
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 30
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 32 →
1
ಯೆಹೋವನು ಮೋಶೆಗೆ - ನೀನು ಇಸ್ರಾಯೇಲ್ಯರಿಗೋಸ್ಕರ ವಿುದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು; ಅನಂತರ ನೀನು ಪಿತೃಗಳ ಬಳಿಗೆ ಸೇರಬೇಕು ಎಂದು ಹೇಳಿದನು.
3
ಆಗ ಮೋಶೆಯು ಇಸ್ರಾಯೇಲ್ಯರಿಗೆ - ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಭಟರನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು;
4
ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.
5
ಆದಕಾರಣ ಇಸ್ರಾಯೇಲ್ಯರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
6
ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
7
ಯೆಹೋವನು ಆಜ್ಞಾಪಿಸಿದಂತೆ ಅವರು ವಿುದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರ ಮಾಡಿದರು.
8
ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.
9
ಇಸ್ರಾಯೇಲ್ಯರು ವಿುದ್ಯಾನ್ಯರ ಎಲ್ಲಾ ಹೆಂಗಸರನ್ನೂ ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ ಆಸ್ತಿಯನ್ನೂ ಸೂರೆಮಾಡಿ
10
ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.
11
ಒಂದನ್ನೂ ಬಿಡದೆ ಮನುಷ್ಯರನ್ನೂ ಪಶುಗಳನ್ನೂ ಸೆರೆಹಿಡಿದರು.
12
ಅವರು ಸೆರೆಯವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಇಸ್ರಾಯೇಲ್ಯರ ಸರ್ವಸಮೂಹದವರು ಇವರ ಬಳಿಗೆ ಬಂದರು.
13
ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.
14
ಆಗ ಮೋಶೆಯು ಯುದ್ಧಭೂವಿುಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡು ಅವರಿಗೆ -
15
ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
16
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
17
ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು;
18
ಪುರುಷಸಂಗಮಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.
19
ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
20
ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನನ್ನೂ ಮೇಕೇಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧಮಾಡಿಕೊಳ್ಳಬೇಕು ಎಂದು ಹೇಳಿದನು.
21
ಮಾಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗಂದನು - ಯೆಹೋವನು ಮೋಶೆಗೆ ಅಪ್ಪಣೆಮಾಡಿದ ವಿಧಿ ಹೇಗಂದರೆ -
22
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ,
23
ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
24
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.
25
ಯೆಹೋವನು ಮೋಶೆಗೆ - ನೀನೂ ಮಾಹಾಯಾಜಕನಾದ ಎಲ್ಲಾಜಾರನೂ ಕುಲಾಧಿಪತಿಗಳೂ ದಂಡಿನವರ ಕೈಗೆ ಸಿಕ್ಕಿದ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಿಸಿ ಒಟ್ಟು ತಿಳಿದು
27
ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ ವಿುಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
28
ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ
29
ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು ಆತನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಬೇಕು.
30
ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.
31
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.
32
ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವದಕ್ಕೋಸ್ಕರ ಉಳಿದದ್ದು ಎಷ್ಟಂದರೆ - ಆಡುಕುರಿಗಳು 675,000, ದನಗಳು 72,000.
33
ಕತ್ತೆಗಳು 61,000, ಕನ್ಯೆಯರು 32,000.
35
ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ 337,500 ಆಡುಕುರಿಗಳಲ್ಲಿ
37
675 ಆಡುಕುರಿಗಳು ಯೆಹೋವನಿಗೆ ಬಂದ ಕಪ್ಪ.
38
ಹಾಗೆಯೇ ಅವರಿಗೆ ದೊರಕಿದ 36,000 ದನಗಳಲ್ಲಿ 72 ದನಗಳೂ,
39
30,500 ಕತ್ತೆಗಳಲ್ಲಿ 61 ಕತ್ತೆಗಳೂ,
40
16,000 ಕನ್ಯೆಯರಲ್ಲಿ 32 ಮಂದಿಯೂ ಯೆಹೋವನಿಗೆ ಬಂದ ಕಪ್ಪ.
41
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.
42
ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ವಿುಕ್ಕ ಅರ್ಧಭಾಗವು -
43
ಅಂದರೆ 337,500 ಆಡು ಕುರಿಗಳು
44
36,000 ದನಗಳು 30,500 ಕತ್ತೆಗಳು 16,000 ಕನ್ಯೆಯರು -
46
ಇಷ್ಟು ಇಸ್ರಾಯೇಲ್ಯ ಸಮೂಹದವರ ಪಾಲಿಗೆ ಬಂದವು.
47
ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
48
ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು -
49
ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
50
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.
51
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು; ಅವುಗಳೆಲ್ಲಾ ವಿಚಿತ್ರವಾಗಿ ಮಾಡಿದವುಗಳೇ.
52
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟಾದ ತೂಕ 16,750 ತೊಲೆ.
53
ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು.
54
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
← Chapter 30
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 32 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36