bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 9
Numbers 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 10 →
1
ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟುಬಂದ ಎರಡನೆಯ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಅರಣ್ಯದಲ್ಲಿ
2
ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ಪಸ್ಕಹಬ್ಬವನ್ನು ನೇಮಕವಾದ ಕಾಲದಲ್ಲಿ ಆಚರಿಸಹೇಳು;
3
ನಾನು ನಿರೂಪಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು ಎಂದು ಹೇಳಿದನು.
4
ಆದಕಾರಣ ಮೋಶೆ ಇಸ್ರಾಯೇಲ್ಯರಿಗೆ - ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿ
5
ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.
6
ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -
7
ಮನುಷ್ಯ ಶವ ಸೋಂಕಿದದರಿಂದ ನಾವು ಅಶುದ್ಧರಾದೆವು. ನಾವು ವಿುಕ್ಕ ಇಸ್ರಾಯೇಲ್ಯರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವದಕ್ಕೆ ಅಪ್ಪಣೆಯಿಲ್ಲವೋ ಎಂದು ಕೇಳಲು ಮೋಶೆ ಅವರಿಗೆ -
8
ಸ್ವಲ್ಪ ಕಾದು ಕೊಂಡಿರ್ರಿ; ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ ಎಂದು ಹೇಳಿದನು.
9
ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
10
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.
11
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.
12
ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ವಿುಗಿಸಬಾರದು; ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ಪ್ರಕಾರವೇ ಅದನ್ನು ಆಚರಿಸಬೇಕು.
13
ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
14
ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.
15
ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.
16
ನಿತ್ಯವೂ ಹಾಗೆಯೇ ಇರುವದು; ಮೇಘವು ದೇವಸ್ಥಾನವನ್ನು ಮುಚ್ಚಿಕೊಂಡಿರುವದು; ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವದು.
17
ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು.
18
ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುವರು.
19
ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರಾಯೇಲ್ಯರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುವರು.
20
ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.
21
ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುವದು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣಮಾಡುವರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುವದು; ಅದು ಯಾವಾಗ ಏಳುವದೋ ಆಗ ಜನರು ಹೊರಡುವರು.
22
ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.
23
ಯೆಹೋವನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು, ಯೆಹೋವನ ಆಜ್ಞೆಯ ಪ್ರಕಾರ ಡೇರೆಗಳನ್ನು ಕಿತ್ತು ಹೊರಡುವರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36