bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Philippians 1
Philippians 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 2 →
1
ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -
2
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3
ನಾನು ನಿಮಗೋಸ್ಕರ ದೇವರನ್ನು ಬೇಡಿಕೊಳ್ಳುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಬೇಡುವವನಾಗಿದ್ದೇನೆ. ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ
5
ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
6
ಈ ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಸಿದ್ಧಿಗೆ ತರುವನೆಂದು ನನಗೆ ಭರವಸವುಂಟು.
7
ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
8
ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
9
ಮತ್ತು ನಾನು ದೇವರನ್ನು ಪ್ರಾರ್ಥಿಸಿ -
10
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು
11
ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.
12
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ಅಪೇಕ್ಷಿಸುತ್ತೇನೆ.
13
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿವಿುತ್ತವೇ ಎಂದು ಅರಮನೆಯ ಪಹರೆಯವರೆಲ್ಲರಿಗೂ ವಿುಕ್ಕಾದವರೆಲ್ಲರಿಗೂ ಪ್ರಸಿದ್ಧವಾಯಿತು.
14
ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.
15
ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
16
ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವದಕ್ಕೆ ಇಲ್ಲಿ ಬಿದ್ದಿರುತ್ತೇನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಾರೆ.
17
ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.
18
ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
19
ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.
20
ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.
21
ನನಗಂತೂ ಬದುಕುವದಂದರೆ ಕ್ರಿಸ್ತನೇ, ಸಾಯುವದು ಲಾಭವೇ.
22
ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.
23
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;
24
ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದೇ ನಿಮಗೋಸ್ಕರ ಬಹು ಅವಶ್ಯವಾದದ್ದು.
25
ಆದದರಿಂದ ನಿಮಗೆ ಕ್ರಿಸ್ತ ನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
26
ಹೀಗೆ ನಾನು ತಿರಿಗಿ ನಿಮ್ಮಲ್ಲಿಗೆ ಬರುವದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉತ್ಸಾಹಪಡುವದಕ್ಕೆ ನನ್ನಿಂದ ಅಧಿಕವಾದ ಆಸ್ಪದವಿರುವದು.
27
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
28
ನೀವು ಹೀಗಿರುವದು ವಿರೋಧಿಗಳ ನಾಶನಕ್ಕೂ ನಿಮ್ಮ ರಕ್ಷಣೆಗೂ ದೇವರಿಂದಾದ ಪ್ರಮಾಣವಾಗಿದೆ.
29
ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.
30
ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದಾಗಿ ಕೇಳುವಂಥ ಅದೇ ಹೋರಾಟವು ನಿಮಗುಂಟು.
Jump to:
Chapter 1
Chapter 2
Chapter 3
Chapter 4
Chapter 2 →
All chapters:
1
2
3
4