bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Proverbs 15
Proverbs 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
1
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.
2
ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.
3
ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.
4
ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.
5
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು.
6
ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ; ದುಷ್ಟನ ಆದಾಯವು ಕಳವಳವೇ.
7
ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.
8
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.
9
ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ.
10
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.
11
ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ.
12
ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು.
13
ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ.
14
ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು.
15
ದೀನನ ದಿನಗಳೆಲ್ಲಾ ದುಃಖಭರಿತ; ಹರ್ಷಹೃದಯನಿಗೆ ನಿತ್ಯವೂ ಔತಣ.
16
ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು.
17
ದ್ವೇಷವಿರುವಲ್ಲಿ ಕೊಬ್ಬಿದ ದನದ ಮಾಂಸಕ್ಕಿಂತಲೂ ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18
ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19
ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.
20
ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
21
ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
22
ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.
23
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ!
24
ವಿವೇಕಿಗೆ ಜೀವದ ಮಾರ್ಗವು ಮೇಲು ಮೇಲಕ್ಕೆ ಹೋಗುತ್ತದೆ; ಅದನ್ನು ಹಿಡಿದವನು ಪಾತಾಳದಿಂದ ತಪ್ಪಿಸಿಕೊಳ್ಳುವನು.
25
ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26
ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ.
27
ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
28
ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.
29
ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
30
ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ.
31
ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
32
ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
33
ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31