bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 15
Revelation 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
1
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.
2
ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು
3
ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;
4
ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.
5
ಇದಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನಗುಡಾರದ ಪವಿತ್ರಸ್ಥಾನವು ತೆರೆಯಿತು;
6
ಅದರೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು; ಅವರು ಪ್ರಕಾಶವೂ ನಿರ್ಮಲವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು; ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
7
ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.
8
ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22