bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 16
Revelation 16
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
1
ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.
2
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.
3
ಎರಡನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದನು. ಅದರ ನೀರು ಸತ್ತವನ ರಕ್ತದ ಹಾಗಾಯಿತು; ಮತ್ತು ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲವು ಸತ್ತುಹೋದವು.
4
ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
5
ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.
6
ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.
7
ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.
8
ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
9
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
10
ಐದನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಹೊಯ್ಯಲು ಅದರ ರಾಜ್ಯವು ಕತ್ತಲಾಯಿತು. ಜನರು ತಮಗಾದ ಕಷ್ಟದ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
11
ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.
12
ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.
13
ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.
14
ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.
15
(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)
16
ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.
17
ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.
18
ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.
19
ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.
20
ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.
21
ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22