bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 18
Revelation 18
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 19 →
1
ಇದಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂವಿುಗೆ ಪ್ರಕಾಶವುಂಟಾಯಿತು.
2
ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.
3
ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
4
ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.
5
ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.
6
ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.
7
ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,
8
ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;
9
ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -
10
ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.
11
ಇದಲ್ಲದೆ ಭೂಲೋಕದ ವರ್ತಕರು ಅವಳ ನಿವಿುತ್ತವಾಗಿ ಅತ್ತು ಗೋಳಾಡುತ್ತಾ - ನಮ್ಮ ಹಡಗುಗಳ ಸರಕುಗಳನ್ನು ಕೊಂಡುಕೊಳ್ಳುವವರು ಇನ್ನು ಇಲ್ಲವಲ್ಲಾ.
12
ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,
13
ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.
14
ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.
15
ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -
16
ಅಯ್ಯೋ, ಅಯ್ಯೋ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾ ಪಟ್ಟಣಕ್ಕೆ ಏನು ದುರ್ಗತಿ ಸಂಭವಿಸಿತು.
17
ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಹಂಬಲಿಸುವರು. ಇದಲ್ಲದೆ ಹಡಗುಗಳ ಯಜಮಾನರೂ ಸಮುದ್ರಪ್ರಯಾಣ ಮಾಡುವವರೂ ನಾವಿಕರೂ ಸಮುದ್ರದ ಮೇಲೆ ಕೆಲಸವನ್ನು ನಡಿಸಿ ಜೀವನ ಮಾಡುವವರೆಲ್ಲರೂ ದೂರದಲ್ಲಿ ನಿಂತು
18
ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.
19
ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.
20
ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.
21
ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
22
ಬಾಬೆಲೇ, ನಿನ್ನಲ್ಲಿ ವೀಣೆಗಾರರೂ ವಾದ್ಯಗಾರರೂ ಕೊಳಲೂದುವವರೂ ತುತೂರಿಯವರೂ ಮಾಡುವ ಧ್ವನಿಯು ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿನ್ನಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
23
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.
24
ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22