bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 2
Revelation 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
1
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -
2
ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
3
ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.
4
ಆದರೆ ಮೊದಲು ನಿನಗಿದ್ದ ಪ್ರೀತಿಯನ್ನು ನೀನು ಬಿಟ್ಟುಬಿಟ್ಟಿದ್ದೀಯೆಂದು ನಾನು ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ.
5
ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.
6
ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.
7
ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
8
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -
9
ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.
10
ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.
11
ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
12
ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -
13
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.
14
ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.
15
ಹಾಗೆಯೇ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
16
ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.
17
ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.
18
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -
19
ಬೆಂಕಿಯ ಉರಿಯಂತಿರುವ ಕಣ್ಣುಗಳೂ ತಾಮ್ರದಂತಿರುವ ಪಾದಗಳೂ ಉಳ್ಳ ದೇವಕುಮಾರನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಪರೋಪಕಾರವನ್ನೂ ತಾಳ್ಮೆಯನ್ನೂ ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
20
ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.
21
ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.
22
ಇಗೋ, ಅವಳು ಹಾಸಿಗೆಯ ಮೇಲೆ ಬಿದ್ದುಕೊಂಡಿರುವಂತೆ ಮಾಡುವೆನು, ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಮನಸ್ಸನ್ನು ದೇವರ ಕಡಗೆ ತಿರುಗಿಸಿಕೊಂಡು ಅವಳ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
23
ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.
24
ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -
25
ನಿಮಗಿರುವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವದಿಲ್ಲವೆಂಬದೇ.
26
ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.
27
ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.
28
ಇದಲ್ಲದೆ ಉದಯಸೂಚಕ ನಕ್ಷತ್ರವನ್ನು ಅವನಿಗೆ ಕೊಡುವೆನು.
29
ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22