bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 5
Revelation 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 6 →
1
ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2
ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು - ಈ ಸುರುಳಿಯನ್ನು ಬಿಚ್ಚುವದಕ್ಕೂ ಇದರ ಮುದ್ರೆಗಳನ್ನು ಒಡೆಯುವದಕ್ಕೂ ಯಾವನು ಯೋಗ್ಯನು ಎಂದು ಮಹಾ ಶಬ್ದದಿಂದ ಸಾರುವದನ್ನು ಕಂಡೆನು.
3
ಆ ಸುರುಳಿಯನ್ನು ಬಿಚ್ಚುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂವಿುಯಲ್ಲಿಯಾಗಲಿ ಭೂವಿುಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
4
ಆಗ ಸುರುಳಿಯನ್ನು ಬಿಚ್ಚುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅಳುತ್ತಿರಲು ಹಿರಿಯರಲ್ಲಿ ಒಬ್ಬನು ನನಗೆ -
5
ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.
6
ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.
7
ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
8
ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
9
ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;
10
ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.
11
ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
12
ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.
13
ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.
14
ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22