bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Romans 11
Romans 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 12 →
1
ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2
ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3
ಅವನು ದೇವರ ಮುಂದೆ - ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದುಹಾಕಿದ್ದಾರೆ, ನಾನೊಬ್ಬನೇ ಉಳಿದಿದ್ದೇನೆ, ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ
4
ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.
5
ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ.
6
ಕೃಪೆಯಿಂದ ಆದುಕೊಂಡನು ಅಂದ ಮೇಲೆ ಪುಣ್ಯಕ್ರಿಯೆಗಳ ಕಾರಣದಿಂದ ಆದುಕೊಳ್ಳಲಿಲ್ಲವಷ್ಟೆ; ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವದಕ್ಕಾಗುವದಿಲ್ಲ.
7
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.
8
ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9
ಇದಲ್ಲದೆ - ಅವರ ಊಟವೇ ಅವರಿಗೆ ಉರ್ಲೂ ಬೋನೂ ಎಡತಡೆಯೂ ಶಿಕ್ಷೆಯೂ ಆಗಲಿ;
10
ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು ಎಂದು ದಾವೀದನು ಹೇಳುತ್ತಾನೆ.
11
ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.
12
ಅವರು ಬಿದ್ದುಹೋದದ್ದು ಸರ್ವಲೋಕದ ಭಾಗ್ಯಕ್ಕೂ ಅವರು ಸೋತು ಹೋದದ್ದು ಅನ್ಯಜನಗಳ ಭಾಗ್ಯಕ್ಕೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಎಷ್ಟೋ ಹೆಚ್ಚಾಗಿ ಭಾಗ್ಯಕ್ಕೆ ಕಾರಣವಾಗುವದು.
13
ಅನ್ಯಜನರಾಗಿರುವ ನಿಮ್ಮ ಸಂಗಡ ಮಾತಾಡುತ್ತೇನೆ. ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಉದ್ಯೋಗವನ್ನು ಗಣ್ಯತೆಗೆ ತರುತ್ತೇನೆ.
14
ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15
ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.
16
ಕಣಕದಲ್ಲಿ ಮೊದಲನೆಯ ಉರುಳಿ ನೈವೇದ್ಯವಾದ ಮೇಲೆ ಕಣಕವೆಲ್ಲಾ ನೈವೇದ್ಯವಾದ ಹಾಗಾಯಿತು; ಬೇರು ದೇವರದಾಗಿದ್ದ ಮೇಲೆ ಕೊಂಬೆಗಳೂ ದೇವರವು.
17
ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;
18
ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
19
ಈ ಮಾತಿಗೆ - ನಾನು ಕಸಿಕಟ್ಟಿಸಿಕೊಳ್ಳುವಂತೆ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ ಎಂದು ನೀನು ಒಂದು ವೇಳೆ ಹೇಳಬಹುದು.
20
ನೀನು ಹೇಳುವದು ನಿಜ; ಅವರು ನಂಬದೆಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ.
21
ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.
22
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23
ಇಸ್ರಾಯೇಲ್ಯರು ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ದೇವರು ಅವರನ್ನು ತಿರಿಗಿ ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
24
ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
25
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;
26
ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27
ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವದು ಎಂದು ಬರೆದದೆ.
28
ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29
ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.
30
ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ
31
ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.
32
ಯಾಕಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಃಸ್ಥಿತಿಯಲ್ಲಿ ಕಟ್ಟಿಹಾಕಿದ್ದಾನೆ.
33
ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!
34
ಕರ್ತನ ಮನಸ್ಸನ್ನು ತಿಳುಕೊಂಡವನಾರು?
35
ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
36
ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 12 →
All chapters:
1
2
3
4
5
6
7
8
9
10
11
12
13
14
15
16