bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Romans 14
Romans 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 15 →
1
ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.
2
ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
3
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.
4
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.
5
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.
6
ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.
7
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
8
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ;
9
ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.
10
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.
11
ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.
12
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13
ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14
ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.
15
ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.
16
ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
17
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
18
ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
19
ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.
20
ದೇವರು ಕಟ್ಟಿದ್ದನ್ನು ನೀನು ಆಹಾರದ ನಿವಿುತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವದು ಕೆಟ್ಟದ್ದು.
21
ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.
22
ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ನಿನ್ನ ಮಟ್ಟಿಗೇ ಇರಲಿ. ತಾನು ಒಪ್ಪಿದ ಕೆಲಸದ ವಿಷಯದಲ್ಲಿ ಇದು ಸರಿಯೋ ಸರಿಯಲ್ಲವೋ ಎಂದು ಸಂಶಯ ಪಡದವನೇ ಧನ್ಯನು.
23
ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 15 →
All chapters:
1
2
3
4
5
6
7
8
9
10
11
12
13
14
15
16