bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Romans 8
Romans 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 9 →
1
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.
2
ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.
3
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
4
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.
5
ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6
ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.
7
ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.
8
ಶರೀರಭಾವಾಧೀನರು ದೇವರಿಗೆ ಮೆಚ್ಚಿಕೆಯಾಗಿರಲಾರರು.
9
ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.
10
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.
11
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
12
ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ [ಪವಿತ್ರಾತ್ಮಾನುಸಾರ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು] ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿಲ್ಲ.
13
ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.
14
ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.
15
ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.
16
ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17
ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18
ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಪದವಿಯನ್ನು ಆಲೋಚಿಸಿ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
19
ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.
20
ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.
21
ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನಂದರೆ ಆ ಜಗತ್ತು ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುವದೇ.
22
ಜಗತ್ತೆಲ್ಲಾ ಇಂದಿನವರೆಗೂ ನರಳುತ್ತಾ ಪ್ರಸವ ವೇದನೆಪಡುತ್ತಾ ಇರುತ್ತದೆಂದು ನಾವು ಬಲ್ಲೆವು.
23
ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.
24
ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?
25
ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.
26
ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.
27
ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
28
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.
29
ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.
30
ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.
31
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
32
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?
33
ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
34
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.
35
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
36
ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.
37
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.
38
ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ
39
ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 9 →
All chapters:
1
2
3
4
5
6
7
8
9
10
11
12
13
14
15
16