bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ruth 3
Ruth 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
1
ನೊವೊವಿುಯು ಸೊಸೆಗೆ - ನನ್ನ ಮಗಳೇ, ನೀನು ಗೃಹಿಣಿಯಾಗಿ ಸುಖದಿಂದಿರುವದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ.
2
ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
3
ನೀನು ಸ್ನಾನಮಾಡಿ ತೈಲಹಚ್ಚಿಕೊಂಡು ಶ್ರೇಷ್ಠವಸ್ತ್ರಗಳನ್ನುಟ್ಟು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು
4
ಅವನು ಮಲಗಿದ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಅಲ್ಲೇ ಮಲಗಿಕೋ; ಆಮೇಲೆ ಮಾಡತಕ್ಕದ್ದನ್ನು ನಿನಗೆ ತಿಳಿಸುವನು ಅಂದಳು.
5
ಅದಕ್ಕೆ ಸೊಸೆಯು - ನೀನು ಹೇಳಿದ್ದನ್ನೆಲ್ಲಾ ಮಾಡುವೆನೆಂದು ಹೇಳಿ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ
6
ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಮಲಗಿದಳು.
8
ಮಧ್ಯರಾತ್ರಿಯಲ್ಲಿ ಆ ಮನುಷ್ಯನು ಹೆದರಿ ಬೊಗ್ಗಿನೋಡಿ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡನು.
9
ಅವನು ಆಕೆಯನ್ನು - ನೀನು ಯಾರು ಎಂದು ಕೇಳಲು ಆಕೆಯು - ನಾನು ನಿನ್ನ ದಾಸಿಯಾದ ರೂತಳು. ನೀನು ಸಮೀಪಬಂಧುವಾಗಿರುವದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು ಅಂದಳು.
10
ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
11
ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
12
ನಾನು ಸಮೀಪ ಬಂಧುವೆಂಬದು ನಿಜ; ಆದರೂ ನನಗಿಂತ ಸಮೀಪನಾದವನು ಒಬ್ಬನಿರುತ್ತಾನೆ.
13
ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನಡಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನಡಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ ಎಂದು ಹೇಳಿದನು.
14
ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತುಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
15
ಆಗ ಅವನು ಆಕೆಗೆ - ನಿನ್ನ ಕಂಬಳಿಯನ್ನು ಹಾಸು ಎಂದು ಹೇಳಿ ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿದನು. ಆಕೆಯು ಊರೊಳಕ್ಕೆ ಹೋಗಿ ಅತ್ತೆಯ ಬಳಿಗೆ ಬಂದಾಗ
16
ಅತ್ತೆಯು - ನನ್ನ ಮಗಳೇ, ನಿನ್ನ ಕಾರ್ಯವೇನಾಯಿತು ಎಂದು ಕೇಳಲು ಆಕೆಯು ಆ ಮನುಷ್ಯನು ನಡಿಸಿದ್ದೆಲ್ಲವನ್ನೂ ತಿಳಿಸಿ -
17
ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು ಅಂದಳು.
18
ಅತ್ತೆಯು - ನನ್ನ ಮಗಳೇ, ಈ ಕಾರ್ಯವು ಹೇಗಾಗುವದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ಹೊತ್ತು ಅದನ್ನು ಇತ್ಯರ್ಥ ಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು ಎಂದು ಹೇಳಿದಳು.
← Chapter 2
Jump to:
Chapter 1
Chapter 2
Chapter 3
Chapter 4
Chapter 4 →
All chapters:
1
2
3
4