bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ruth 4
Ruth 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
1
ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.
2
ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕೂತುಕೊಂಡರು.
3
ಆಗ ಅವನು ಆ ಸಮೀಪಬಂಧುವಿಗೆ - ಮೋವಾಬ್ದೇಶದಿಂದ ಹಿಂದಿರುಗಿ ಬಂದಿರುವ ನೊವೊವಿುಯು ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಿಬಿಡಬೇಕೆಂದಿರುತ್ತಾಳೆ. ನಾನು ನಿನಗೆ ಹೇಳಬೇಕೆಂದಿರುವದೇನಂದರೆ -
4
ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.
5
ಆಗ ಬೋವಜನು - ನೀನು ನೊವೊವಿುಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ ಹೊಲದ ಖಾತೆಯು ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುವಂತೆ ಅವನ ಹೆಂಡತಿಯೂ ಮೋವಾಬ್ ಸ್ತ್ರೀಯೂ ಆದ ರೂತಳನ್ನೂ ತೆಗೆದುಕೊಳ್ಳಬೇಕು ಎಂದು ತಿಳಿಸಲು
6
ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.
7
ಯಾವದಾದರೊಂದು ವಸ್ತುವನ್ನು ತೆಗೆದುಕೊಳ್ಳುವಾಗಲೂ ಕೊಡುವಾಗಲೂ ಮಾತನ್ನು ದೃಢಪಡಿಸುವದಕ್ಕೋಸ್ಕರ ಇಸ್ರಾಯೇಲ್ಯರಲ್ಲಿ ಪೂರ್ವಕಾಲದಿಂದಿದ್ದ ಪದ್ಧತಿ ಯಾವದಂದರೆ - ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಕೆರವನ್ನು ಕೊಡುವನು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
8
ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ - ನೀನೇ ತೆಗೆದುಕೋ ಎಂದು ಹೇಳಿ ತನ್ನ ಕೆರವನ್ನು ತೆಗೆದುಕೊಟ್ಟನು.
9
ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ - ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬವರಿಗಿದ್ದದ್ದನ್ನೆಲ್ಲಾ ನೊವೊವಿುಯಿಂದ ತೆಗೆದುಕೊಂಡಿದ್ದೇನೆ;
10
ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ನಿಂತು ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಮೋವಾಬ್ಯಳೂ ಅವನ ಹೆಂಡತಿಯೂ ಆದ ರೂತಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ;
11
ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.
12
ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ ಅಂದರು.
13
ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿ ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
14
ಆಗ ಹೆಂಗಸರು ನೊವೊವಿುಗೆ - ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಹೆಸರು ಹೊಂದಲಿ.
15
ಇವನು ನಿನ್ನನ್ನು ಉಜ್ಜೀವಿಸಮಾಡುವನು; ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ ಎಂದು ಹೇಳಿದರು.
16
ನೊವೊವಿುಯೇ ಆ ಮಗುವನ್ನು ಉಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.
17
ನೆರೆಹೊರೆಯ ಹೆಂಗಸರು ನೊವೊವಿುಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ ದಾವೀದನಿಗೆ ಅಜ್ಜನೂ ಆದನು.
18
ಪೆರೆಚನ ವಂಶಾವಳಿ - ಪೆರೆಚನು ಹೆಚ್ರೋನನನ್ನು ಪಡೆದನು;
19
ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
20
ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು.
21
ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
22
ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
← Chapter 3
Jump to:
Chapter 1
Chapter 2
Chapter 3
Chapter 4
All chapters:
1
2
3
4