bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Titus 1
Titus 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 2 →
1
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.
5
ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.
6
ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.
7
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ
8
ಅತಿಥಿಸತ್ಕಾರಮಾಡುವವನೂ ಒಳ್ಳೇದನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು
9
ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.
10
ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.
11
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.
12
ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.
13
ಆದಕಾರಣ ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.
15
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.
16
ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.
Jump to:
Chapter 1
Chapter 2
Chapter 3
Chapter 2 →
All chapters:
1
2
3