bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Titus 2
Titus 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 3 →
1
ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2
ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ
3
ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.
4
ಇದಲ್ಲದೆ ಅವರು ಪ್ರಾಯದ ಸ್ತ್ರೀಯರಿಗೆ - ನಿಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನೀವು ಗಂಡಂದಿರನ್ನೂ ಮಕ್ಕಳನ್ನೂ ಪ್ರೀತಿಸುವವರೂ ದಮೆಯುಳ್ಳವರೂ ಪತಿವ್ರತೆಯರೂ
5
ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.
6
ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.
7
ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;
8
ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.
9
ದಾಸರು ಎಲ್ಲಾದರಲ್ಲಿ ತಮ್ಮ ಯಜಮಾನರಿಗೆ ಅಧೀನರಾಗಿದ್ದು ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ
10
ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.
11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
12
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.
14
ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
15
ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
← Chapter 1
Jump to:
Chapter 1
Chapter 2
Chapter 3
Chapter 3 →
All chapters:
1
2
3