bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 11
Zechariah 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 12 →
1
ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!
2
ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.
3
ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ.
4
ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;
5
ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.
6
(ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).
7
ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.
8
ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.
9
ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು
10
ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು ಕನಿಕರವೆಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು.
11
ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.
12
ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.
13
ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ ಅದನ್ನು ಡಬ್ಬಿಗೆ ಹಾಕು ಎಂದು ಅಪ್ಪಣೆಮಾಡಿದಾಗ ನಾನು ಆ ಮೂವತ್ತು ತೊಲ ಬೆಳ್ಳಿಯನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
14
ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.
15
ಆಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮುಕ್ಕಕುರುಬನಂತೆ ನಟಿಸು.
16
ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.
17
ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 12 →
All chapters:
1
2
3
4
5
6
7
8
9
10
11
12
13
14