bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 12
Zechariah 12
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 13 →
1
ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -
2
ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.
3
ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.
4
ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
5
ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.
6
ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.
7
ದಾವೀದ ವಂಶದವರ ಮಹಿಮೆಯೂ ಯೆರೂಸಲೇವಿುನವರ ಮಹಿಮೆಯೂ ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
8
ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.
9
ಯೆರೂಸಲೇವಿುನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.
10
ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
11
ಮೆಗಿದ್ದೋವಿನ ತಗ್ಗಿನೊಳಗೆ ಹದದ್ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.
12
ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;
13
ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
14
ವಿುಕ್ಕ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು ಗಂಡಸರು ಬೇರೆ ಬೇರೆ; ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 13 →
All chapters:
1
2
3
4
5
6
7
8
9
10
11
12
13
14