bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 13
Zechariah 13
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 14 →
1
ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.
2
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
3
ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.
4
ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
5
ಒಬ್ಬನು - ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕತನದಿಂದಲೂ ಗುಲಾಮನಾಗಿದ್ದೇನೆ ಎಂದು ಹೇಳಲು
6
ಮತ್ತೊಬ್ಬನು ಅವನನ್ನು - ನಿನ್ನ ಎದೆಯ ಮೇಲಿನ ಈ ಗಾಯಗಳೇನು ಎಂದು ಕೇಳಿದರೆ ಅವನು - ವಿುತ್ರರ ಮನೆಯಲ್ಲಿ ನನಗಾದ ಗಾಯಗಳು ಎಂದುತ್ತರ ಕೊಡುವನು.
7
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
8
ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.
9
ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 14 →
All chapters:
1
2
3
4
5
6
7
8
9
10
11
12
13
14