bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 14
Zechariah 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
1
ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.
2
ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.
3
ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
4
ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.
5
ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.
6
ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,
7
ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.
8
ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.
9
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.
10
ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.
11
ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.
12
ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.
13
ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
14
ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು.
15
ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ, ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವದು.
16
ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.
17
ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.
18
ಐಗುಪ್ತ ಕುಲದವರು ಹೊರಟು ಬಾರದಿದ್ದರೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವದು.
19
ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
20
ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
21
ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
All chapters:
1
2
3
4
5
6
7
8
9
10
11
12
13
14