bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 2
Zechariah 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
1
ನಾನು ಕಣ್ಣೆತ್ತಿನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
2
ನಾನು ಅವನನ್ನು - ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವನು ನನಗೆ - ಯೆರೂಸಲೇವಿುನ ಅಗಲ ಉದ್ದ ಇಷ್ಟಿಷ್ಟಿರಬೇಕೆಂದು ಅಳೆದು ನೋಡುವದಕ್ಕೆ ಹೋಗುತ್ತೇನೆ ಎಂಬದಾಗಿ ಹೇಳಿದನು.
3
ಇಗೋ, ವಿವರಿಸುವ ದೇವದೂತನು ಮುಂದರಿದು ತನ್ನನ್ನು ಎದುರುಗೊಳ್ಳುವದಕ್ಕೆ ಬಂದ ಮತ್ತೊಬ್ಬ ದೇವದೂತನಿಗೆ ಹೀಗೆ ಹೇಳಿದನು -
4
ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.
5
ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.
6
ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.
7
ಎಲೈ, ಬಾಬೆಲ್ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
8
ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -
9
ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.
10
ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
11
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.
12
ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವಾಸ್ತ್ಯವನ್ನಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
13
ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
All chapters:
1
2
3
4
5
6
7
8
9
10
11
12
13
14