bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 4
Zechariah 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 5 →
1
ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು -
2
ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
3
ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಅಂತು ಎರಡು ಮರಗಳು ಅದರ ಪಕ್ಕಗಳಲ್ಲಿವೆ ಎಂದು ಹೇಳಿದೆನು.
4
ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು -
5
ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಪ್ರಶ್ನೆಮಾಡಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.
6
ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ
7
ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.
8
ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ -
9
ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.
10
ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?
11
ಇದನ್ನು ಕೇಳಿ ನಾನು ದೇವದೂತನನ್ನು - ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು ಎಂದು ಪ್ರಶ್ನೆಮಾಡಿ
12
ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು -
13
ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಕೇಳಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.
14
ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 5 →
All chapters:
1
2
3
4
5
6
7
8
9
10
11
12
13
14