bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 6
Zechariah 6
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 7 →
1
ಪುನಃ ನಾನು ಕಣ್ಣೆತ್ತಿನೋಡಲು ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು, ಆ ಬೆಟ್ಟಗಳು ತಾಮ್ರದವುಗಳು.
2
ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,
3
ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.
4
ವಿವರಿಸುವ ದೇವದೂತನನ್ನು - ಸ್ವಾಮೀ, ಇವುಗಳು ಏನು ಎಂದು ನಾನು ಪ್ರಸ್ತಾಪವೆತ್ತಿ ಕೇಳಲು ಆ ದೇವದೂತನು ನನಗೆ -
5
ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದೊಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ ಎಂದುತ್ತರ ಕೊಟ್ಟನು.
6
ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.
7
ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.
8
ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.
9
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
10
ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ
11
ಇವರಿಂದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಕಿರೀಟವನ್ನು ರೂಪಿಸಿ ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಯ ಮೇಲೆ ಇಟ್ಟು
12
ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;
13
ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.
14
ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು.
15
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 7 →
All chapters:
1
2
3
4
5
6
7
8
9
10
11
12
13
14