bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 7
Zechariah 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 8 →
1
ಅರಸನಾದ ದಾರ್ಯಾವೆಷನ ಆಳಿಕೆಯ ನಾಲ್ಕನೆಯ ವರುಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
2
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
3
ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.
4
ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
5
ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
6
ನೀವು ಭೋಜನ ಮಾಡುವಾಗಲೂ ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವಾಗಿಯೇ ಇರುವವಲ್ಲವೆ.
7
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?
8
ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ಮಾತನ್ನು ದಯಪಾಲಿಸಿದನು -
9
ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,
10
ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ,
11
ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.
12
ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.
13
ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;
14
ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 8 →
All chapters:
1
2
3
4
5
6
7
8
9
10
11
12
13
14